- Advertisement -
- Advertisement -



ಬೆಳ್ತಂಗಡಿ: ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಕೋಕಲದ ನಿವಾಸಿ ಸಾಯಿ ಶಾಂತಿ ಅವರ ಪುತ್ರ ಸುಮಂತ್ (20) ಎಂದು ಗುರುತಿಸಲಾಗಿದೆ.
ಮುಂಜಾನೆ 5ಗಂಟೆಯ ಹೊತ್ತಿಗೆ ಎದ್ದು ತೋಟಕ್ಕೆ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆತ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಉಜಿರೆಯ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -