Tuesday, June 16, 2026
spot_imgspot_img
spot_imgspot_img

ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ; ಆ.30ರ ವರೆಗೆ ಯಡಿಯೂರಪ್ಪ ನಿರಾಳ..!

- Advertisement -
- Advertisement -

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶ ನೀಡಲಾಗಿದೆ.ಮತ್ತು ಹೈಕೋರ್ಟ್‌ ಆ.30ರವರೆಗೆ ಬಿಎಸ್‌ವೈ ಗೆ ವಿನಾಯಿತಿ ನೀಡಿದೆ.

ಬಿ.ಎಸ್‌. ಯಡಿಯೂರಪ್ಪ, ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂಬುವುದಾಗಿ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.

ಯಡಿಯೂರಪ್ಪ ಪರ ವಕೀಲರು ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು. ಈ ಕಾರಣದಿಂದ ಅರ್ಜಿಗಳ ವಿಚಾರಣೆಯನ್ನು ಆ.30ಕ್ಕೆ ಮುಂದೂಡಿದ ನ್ಯಾಯಪೀಠ, ಅಲ್ಲಿಯವರೆಗೆ ಅರ್ಜಿಗಳ ಸಂಬಂಧ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ.

- Advertisement -

Related news

error: Content is protected !!