Sunday, June 29, 2025
spot_imgspot_img
spot_imgspot_img

ಅಕ್ರಮವಾಗಿ ರೈಲಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಾಟ : ಆರೋಪಿಗಳು ಪರಾರಿ

- Advertisement -
- Advertisement -

ಅಕ್ರಮವಾಗಿ ರೈಲಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾವನ್ನು ರೈಲ್ವೆ ಪೊಲೀಸರು ಪತ್ತೆಹಚ್ಚಿರುವ ಘಟನೆ ಚಿತ್ರದುರ್ಗದ ಬಳಿ ನಡೆದಿದೆ.

ಒಡಿಶಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ 34 ಲಕ್ಷ ರೂ. ಮೌಲ್ಯದ ಗಾಂಜಾವನ್ನು ರೈಲ್ವೆ ಪೊಲೀಸರು ಪತ್ತೆಹಚ್ಚಿದ್ದಾರೆ, ಚಿತ್ರದುರ್ಗದ ಬಳಿ ರೈಲಿನ ಬೋಗಿಯೊಂದರಲ್ಲಿ ತಲಾ 17 ಕೆಜಿ ತೂಕದ ಎರಡು ಬ್ಯಾಗ್ ಗಳಲ್ಲಿ 34 ಕೆಜಿ ಗಾಂಜಾ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಆರೋಪಿಗಳು ಒಂದು ಬೋಗಿಯಲ್ಲಿ ಗಾಂಜಾವನ್ನಿಟ್ಟು ಇನ್ನೊಂದು ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಪೊಲೀಸರು ಗಾಂಜಾವನ್ನು ಪತ್ತೆ ಹಚ್ಚುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ದಾವಣಗೆರೆ ರೈಲ್ವೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!