Monday, June 30, 2025
spot_imgspot_img
spot_imgspot_img

ಮಹಾರಾಷ್ಟ್ರದಲ್ಲಿ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ

- Advertisement -
- Advertisement -

ಕಳೆದ ವರ್ಷ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ನಿನ್ನೆ (ಆಗಸ್ಟ್ 26) ಕುಸಿದು ಬಿದ್ದಿದೆ. ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ ನಿರ್ಮಿಸಲಾಗಿದ್ದ 35 ಅಡಿ ಎತ್ತರದ ಪ್ರತಿಮೆ ನಿನ್ನೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕುಸಿದಿದೆ. ಸದ್ಯ ಪ್ರತಿಮೆ ಕುಸಿತಕ್ಕೆ ನಿಜವಾದ ಕಾರಣ ಏನು ಎಂಬುದು ದೃಢಪಟ್ಟಿಲ್ಲ, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ವಿರೋಧ ಪಕ್ಷಗಳು ಈ ಬಗ್ಗೆ ರಾಜ್ಯ ಸರ್ಕಾರವನ್ನು ಟೀಕಿಸಿವೆ ಮತ್ತು ಕಾಮಗಾರಿಯ ಗುಣಮಟ್ಟದ ಬಗ್ಗೆ ಕಡಿಮೆ ಗಮನ ಹರಿಸಿದೆ ಎಂದು ಆರೋಪಿಸಿದೆ. ಆದರೆ ಈ ಜಿಲ್ಲೆಯಲ್ಲಿ ಕಳೆದ 2-3 ದಿನಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಬೀಸಿದೆ. ಇದೇ ಕುಸಿತಕ್ಕೆ ಕಾರಣವಿರಬಹುದು ಎಂದು ಅಧಿಕಾರಿ ಹೇಳಿದ್ದಾರೆ.

ಪೊಲೀಸ್ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕನ ನಡೆಸಿದ್ದು, ಹಾನಿಯನ್ನು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ. ಕಳೆದ ವರ್ಷ ಡಿಸೆಂಬರ್ 4ರಂದು ನೌಕಾಪಡೆಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಾಜಿ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಬಳಿಕ, ಕೋಟೆಯಲ್ಲಿ ನಡೆದ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.

ಅಧಿಕಾರಿಗಳು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಈ ಘಟನೆಯ ಹಿಂದಿನ ಕಾರಣವನ್ನು ಕಂಡುಹಿಡಿಯಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಅದೇ ಸ್ಥಳದಲ್ಲಿ ಶಿವಾಜಿಯ ಪ್ರತಿಮೆಯನ್ನು ಮರುಸ್ಥಾಪಿಸುವುದಾಗಿ ಭರವಸೆ ನೀಡಿದ್ದಾರೆ.

- Advertisement -

Related news

error: Content is protected !!