- Advertisement -
- Advertisement -



ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಪುತ್ರ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 2019ರಿಂದ ಬಿಸಿಸಿಐನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಜಯ್ ಶಾ ಈಗ ಐಸಿಸಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಈ ಹಿಂದೆ ಬಿಸಿಸಿಐ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಜಯ್ ಶಾ ಈ ಬಾರಿಯ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ಅವರಿಗೆ ಪ್ರತಿಸ್ಫರ್ಧಿಯಾಗಿ ಯಾರು ಸಹ ನಾಮಪತ್ರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಇಂದು (ಆಗಸ್ಟ್ 27) ಅಧಿಕೃತವಾಗಿ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದು, 2024ರ ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಜಯ್ ಶಾ ಐಸಿಸಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮೂರನೇ ಭಾರತೀಯ. ಈ ಹಿಂದೆ ಜಗಮೋಹನ್ ದಾಲ್ಮಿಯಾ ಹಾಗೂ ಶರದ್ ಪವಾರ್ ಐಸಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು. ಈಗ ಮತ್ತೊಮ್ಮೆ ಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಭಾರತೀಯ ಪಟ್ಟ ಅಲಂಕರಿಸಿದ್ದು ಭಾರತದ ಹೆಮ್ಮೆಗೆ ಮತ್ತೊಂದು ಗರಿ ಮೂಡಿದೆ.
- Advertisement -








