Monday, August 3, 2026
spot_imgspot_img
spot_imgspot_img

ಪುತ್ತೂರು ನಗರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ/ ಬಾಲಕಿಯರ ತ್ರೋಬಾಲ್ ಪಂದ್ಯಾಟ – ಪುತ್ತೂರು ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

- Advertisement -
- Advertisement -

ಪುತ್ತೂರು ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ಶಾಲಾ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಪುತ್ತೂರು ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ದ್ವಿತೀಯ ಸ್ಥಾನವನ್ನು ಬಾಲಕರ ವಿಭಾಗದಲ್ಲಿ ಲಿಟಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಪಡೆದರೆ ಬಾಲಕಿಯರ ವಿಭಾಗದಲ್ಲಿ ಸಾಲ್ಮರದ ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಶಾಲೆ ಪಡೆದಿದೆ.

ಪ್ರೌಢಶಾಲಾ ಬಾಲಕರ ವಿಭಾಗದಲ್ಲೂ ಪಾಂಗ್ಲಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ದ್ವಿತೀಯ ಸ್ಥಾನವನ್ನು ಸಾಲ್ಮರದ ಪ್ರೌಢಶಾಲೆಯು ಪಡೆದರೆ ಬಾಲಕಿಯರ ವಿಭಾಗದಲ್ಲಿ ಪ್ರಥಮ ಪಾಂಗ್ಲಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಪಡೆದು ಸಾಲ್ಮರದ ಪ್ರೌಢಶಾಲೆ ದ್ವಿತೀಯ ಸ್ಥಾನವನ್ನು ಪಡೆದಿದೆ.

ಈ ನಾಲ್ಕು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ದರ್ಬೆ ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಶಾಲೆಯ ಮಕ್ಕಳ ಸಾದನೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಈ ಮಕ್ಕಳಿಗೆ ತರಬೇತು ನೀಡಿದ ದೈಹಿಕ ಶಿಕ್ಷಕರಾದ ನಿರಂಜನ್, ಅಕ್ಷಯ್ ಮತ್ತು ಹರೀಶ್ ರವರ ಶ್ರಮಕ್ಕೆ ಯಶಸ್ಸು ದೊರಕಿದೆ.
ಶಾಲಾ ಮುಖ್ಯೋಪಾಧ್ಯಾಯರಾದ ಭಗಿನಿ ಶಾಂತಿ ಬಿ.ಎಸ್ ಮತ್ತು ಭಗಿನಿ ಸೆಲಿನ್ ಪೆತ್ರಾರವರು ಮಕ್ಕಳಿಗೆ ಶುಭ ಆರೈಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!