Sunday, June 29, 2025
spot_imgspot_img
spot_imgspot_img

ಉಡುಪಿ: ಹಾಸ್ಟೆಲ್‌ಗೆ ಅಕ್ರಮ ಪ್ರವೇಶೀಸಿ ವಿದ್ಯಾರ್ಥಿನಿಗೆ ಕಿರುಕಳ; ಪ್ರಕರಣ ದಾಖಲು..!

- Advertisement -
- Advertisement -

ಉಡುಪಿ: ವ್ಯಕ್ತಿಯೋರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ಮಣಿಪಾಲದಲ್ಲಿ ನಡೆದಿದೆ.

ಮಣಿಪಾಲದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಅನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ವ್ಯಕ್ತಿಯೋರ್ವ ಅಕ್ರಮವಾಗಿ ಪ್ರವೇಶ ನೀಡಿದ್ದಾನೆ. ಮಧ್ಯರಾತ್ರಿ ವೇಳೆ ಈ ಘಟನೆ ನಡೆದಿದ್ದು ಕಿಟಕಿಯ ಬಳಿ ಮಲಗಿದ್ದ ವಿದ್ಯಾರ್ಥಿನಿಗೆ ಈತ ಕಿರುಕುಳ ನೀಡಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ಕಿರುಚಾಡಿದ್ದು ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ವಿದ್ಯಾರ್ಥಿ ನಿಲಯದಲ್ಲಿ ಒಟ್ಟು 90 ವಿದ್ಯಾರ್ಥಿನಿಯರಿದ್ದು, 4 ಸಿಬಂಧಿಗಳು ಇದ್ದಾರೆ. ಆದರೆ ಇವರೆಲ್ಲರ ಕಣ್ಣು ತಪ್ಪಿಸಿ ವ್ಯಕ್ತಿ ವಿದ್ಯಾರ್ಥಿನಿಲಯಕ್ಕೆ ಪ್ರವೇಶ ನೀಡಿ ಈ ಕೃತ್ಯ ಎಸಗಿದ್ದಾನೆ. ಘಟನೆ ಬಳಿಕ ಪೊಲೀಸರು ಅಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿದ ವೇಳೆ ವ್ಯಕ್ತಿಯೊಬ್ಬ ಓಡಾಟ ನಡೆಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!