Saturday, June 28, 2025
spot_imgspot_img
spot_imgspot_img

ಸುರತ್ಕಲ್ : ಹಿಂದಿನಿಂದ ವಾಹನ ಬಡಿದು ದ್ವಿಚಕ್ರ ಸವಾರ ಮೃತ್ಯು..!

- Advertisement -
- Advertisement -

ಸುರತ್ಕಲ್ : ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ವಾಹನ ಬಡಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.

ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಎಂದು ಗುರುತಿಸಲಾಗಿದೆ.

ಪಣಂಬೂರು ಬಂದರ್ ನಲ್ಲಿ ಉದ್ಯೋಗದಲ್ಲಿದ್ದ ಗಣೇಶ ರವರು ಬೆಳಗ್ಗೆ 7ಗಂಟೆಯ ಸುಮಾರಿಗೆ ಕೆಲಸಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ನಿಧಾನಿಸಿದಾಗ ಹಿಂದಿನಿಂದ ವೇಗವಾಗಿ ಬಂದ ವಾಹನ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು ‌ಎಂದು ತಿಳಿದುಬಂದಿದೆ. ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆ ದಾಖಲಿಸಿದ್ದು, ಅವರು ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸರುಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!