Sunday, June 29, 2025
spot_imgspot_img
spot_imgspot_img

ಕಚ್ಚಾತೈಲ ಬೆಲೆ ಇಳಿಕೆ : ಭಾರತದಾದ್ಯಂತ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ..

- Advertisement -
- Advertisement -

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಾಣುತ್ತಿದೆ. ದೇಶಾದ್ಯಂತ ಇಂಧನ ಬೆಲೆ ಸ್ಥಿರವಾಗಿದೆ.

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 71.06 ಡಾಲರ್​ ಆಗಿದ್ದು, WTI ಕಚ್ಚಾ ಪ್ರತಿ ಬ್ಯಾರೆಲ್‌ಗೆ 67.67 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ ಆಗಿದ್ದು , ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.76 ರೂ.ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 102.84 ರೂ.,ಡೀಸೆಲ್ ದರ 88.95 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ.

ಇಂದು ಗುವಾಹಟಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.14 ರೂ. ಗಯಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.55 ರೂ. ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.24 ರೂ. ದುರ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100.56 ರೂ. ಪಣಜಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.52 ರೂ. ಪಟಾನ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.48 ರೂ. ಕರ್ನಾಲ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.68 ರೂ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.86 ರೂ. ಇದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

- Advertisement -

Related news

error: Content is protected !!