Friday, June 27, 2025
spot_imgspot_img
spot_imgspot_img

ಲಾಂಗ್​ ಡ್ರೈವ್​ ಹೋಗಿದ್ದ ಮೂವರು ವಿದ್ಯಾರ್ಥಿಗಳು ಹಿಟ್‌‌ ಆ್ಯಂಡ್ ರನ್​ಗೆ ಬಲಿ..!

- Advertisement -
- Advertisement -

ಬೆಂಗಳೂರು : ತಡರಾತ್ರಿ ಬೈಕ್​ನಲ್ಲಿ ಲಾಂಗ್ ಡ್ರೈವ್ ಹೊರಟಿದ್ದ ಮೂವರು ವಿದ್ಯಾರ್ಥಿಗಳು ಹಿಟ್​ ಆ್ಯಂಡ್ ರನ್​ಗೆ ಬಲಿಯಾದ ಘಟನೆ ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ನಡೆದಿದೆ.

ಮೂವರು ಯುವಕರು ಬೈಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಯುವಕರನ್ನು ರೋಹಿತ್​​(22), ಸುಚಿತ್(22), ಹರ್ಷ(22) ಎಂದು ಗುರುತಿಸಲಾಗಿದೆ.

ಮೃತ ಮೂವರು GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದ ಭೀಕರತೆಗೆ ಹೆದ್ದಾರಿಯಲ್ಲಿ ನಜ್ಜು ಗುಜ್ಜಾದ ಸ್ಥಿತಿಯಲ್ಲಿ ಮೃತ ದೇಹಗಳು ಚೆಲ್ಲಾಪಿಲ್ಲಿಯಾಗಿವೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತದೇಹಗಳು ಅಂಬೇಡ್ಕರ್​​​ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!