Saturday, June 28, 2025
spot_imgspot_img
spot_imgspot_img

ಮುಡಾ ಹಗರಣ ಕೇಸ್‌: ಸಿಎಂ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಸೈಟ್‌ ಹಗರಣ ಆರೋಪದ ಕಾನೂನು ಹೋರಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದೆ.
ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್ ಮನು ಸಿಂಘ್ವಿ, ಪ್ರೊ.ರವಿವರ್ಮ ಕುಮಾರ್, ಸರಕಾರದ ಪರ ಎ.ಜಿ.ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ದೂರುದಾರ ಟಿ.ಜೆ.ಅಬ್ರಹಾಂ ಪರ ವಕೀಲ ರಂಗನಾಥ್ ರೆಡ್ಡಿ ಪ್ರತಿವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿ, ತೀರ್ಪು ಕಾಯ್ದಿರಿಸಿದೆ.ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಏನು ತೀರ್ಪು ಬರುತ್ತೆ ಎಂದು ಟೆನ್ಷನ್ ಶುರುವಾಗಿದೆ.

- Advertisement -

Related news

error: Content is protected !!