Sunday, June 29, 2025
spot_imgspot_img
spot_imgspot_img

ಉಪ್ಪಿನಂಗಡಿ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪೋಕ್ಸೋ ಕಾಯ್ದೆಯಡಿ ಆರೋಪಿ ಅರೆಸ್ಟ್..!

- Advertisement -
- Advertisement -

ಉಪ್ಪಿನಂಗಡಿ: ಅಪ್ರಾಪ್ತ ವಯಸ್ಕ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ನೆಲ್ಯಾಡಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿ ದೂರವಾಣಿ ಮೂಲಕ ಸಂಪರ್ಕಿಸಿ ಆತ್ಮೀಯತೆ ಬೆಳೆಸಿದ್ದ. ಜು.21ರಂದು ಆಕೆಯನ್ನು ನೆಲ್ಯಾಡಿಗೆ ಕರೆಸಿಕೊಂಡು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ತು ಅತ್ಯಾಚಾರವೆಸಗಿರುತ್ತಾನೆ ಹಾಗೂ ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡಲಾಗುವುದು ಎಂದು ಬೆದರಿಕೆ ಒಡ್ಡಿರುತ್ತಾನೆಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿರುತ್ತಾಳೆ.

ಉಪ್ಪಿನಂಗಡಿ ಪೊಲೀಸರು ಕಲಂ: 64(1),351 (2) BNS-2023 ಕಲಂ4 ಪೋಕ್ಸೋ ಕಾಯ್ದೆ- 2012 ರಂತೆ ಅಪರಾಧ ಸಂಖ್ಯೆ: 104/2024 ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!