



ಮೂರು ಬಾರಿಯ ಗಡುವು ವಿಸ್ತರಣೆಯ ನಂತರ ಕೊನೆಗೂ ಇದೀಗ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಯ ಕೊನೆಯ ಡೆಡ್ಲೈನ್ ಸೆಪ್ಟೆಂಬರ್ 15ರಂದು ಕೊನೆಗೊಳ್ಳಲಿದೆ. ನಿಯಮದ ಪ್ರಕಾರ, ಎಚ್ಎಸ್ಆರ್ಪಿ ಅಳವಡಿಸದ ವಾಹನ ಮಾಲೀಕರಿಗೆ ಸೆಪ್ಟೆಂಬರ್ 16ರಿಂದ 500 ರೂ. ದಂಡ ವಿಧಿಸಲಾಗುತ್ತದೆ.
ಕರ್ನಾಟಕದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್ಎಸ್ಆರ್ಪಿ) ಅಳವಡಿಕೆಗೆ ಕೊನೆಯ ದಿನ ಸೆಪ್ಟೆಂಬರ್ 15 ಆಗಿದ್ದು, ಈವರೆಗೆ ಕೇವಲ 52 ಲಕ್ಷ ವಾಹನಗಳಿಗಷ್ಟೇ ಎಚ್ಎಸ್ಆರ್ಪಿ ಅಳವಡಿಸಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಕೆಲವು ಬಾರಿ ಅವಧಿ ವಿಸ್ತರಣೆ ಮಾಡಲಾಗಿದ್ದು, ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ಸೆಪ್ಟೆಂಬರ್ 15ರ ನಂತರ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಹೇಳಿದೆ.
ಎಚ್ಎಸ್ಆರ್ಪಿ ಅಳವಡಿಕೆ ಗಡುವು ವಿಸ್ತರಣೆ ಬಗ್ಗೆ ಸೆಪ್ಟೆಂಬರ್ 18 ಹೈಕೋರ್ಟ್ ವಿಚಾರಣೆಯ ನಂತರವೇ ಕರ್ನಾಟಕ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.