Wednesday, April 23, 2025
spot_imgspot_img
spot_imgspot_img

ಕಾಸರಗೋಡು: ಮನೆಗೆ ಪೊಲೀಸ್ ತಂಡ ದಾಳಿ ; ಕೋಟ್ಯಾಂತರ ರೂ. ಮಾದಕ ವಸ್ತು ವಶಕ್ಕೆ

- Advertisement -
- Advertisement -

ಕಾಸರಗೋಡು : ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್ಪಿ ಮನೋಜ್ ನೇತೃತ್ವದ ಪೊಲೀಸ್‌ ತಂಡ ಸುಮಾರು 3.5 ಕೋಟಿ ರೂ. ಬೆಲೆಯ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಉಪ್ಪಳ ಪತ್ವಾಡಿ ಕೊಂಡೆವೂರು ಸಮೀಪದ ಮನೆಯಿಂದ ಎಂಡಿಎಂಎ ಸೇರಿದಂತೆ ಮಾದಕ ವಸ್ತುವನ್ನು ವಶಪಡಿಸಿಕೊಳ್ಳ ಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಸ್ಕರ್ ಅಲಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.

ಆ. 30 ರಂದು ಮೇಲ್ಪರಂಬದಲ್ಲಿ ಎಂಡಿಎಂಎ ಸಹಿತ ಅಬ್ದುಲ್ ರಹೀಂ ಎಂಬಾತನನ್ನು ಬಂಧಿಸಲಾಗಿತ್ತು. ಈತನಿಂದ ಲಭಿಸಿದ ಖಚಿತ ಮಾಹಿತಿಯಂತೆ ಉಪ್ಪಳದ ಮನೆಗೆ ದಾಳಿ ನಡೆಸಲಾಗಿದೆ.

ಕಾರ್ಡ್ ಬೋರ್ಡ್ ಪೆಟ್ಟಿಗೆಯಲ್ಲಿರಿಸಲಾಗಿದ್ದ ಮೂರು ಕಿಲೋ ಎಂಡಿಎಂಎ ಹಾಗೂ ಒಂದು ಕಿಲೋ ಗಾಂಜಾ ವನ್ನು ವಶಪಡಿಸಿ ಕೊಳ್ಳಲಾಗಿದೆ. ಇದಲ್ಲದೆ ಹಲವಾರು ಮಾದಕ ದ್ರವ್ಯ ಹಾಗೂ ಮಾತ್ರೆಯನ್ನು ವಶಪಸಿಕೊಳ್ಳಲಾಗಿದೆ, ಹಲವು ವರ್ಷಗಳ ಹಿಂದೆ ಈ ಮನೆಯನ್ನು ಖರೀದಿಸಿ ಮಾದಕ ವಸ್ತು ವಹಿವಾಟು ನಡೆಸಿದ್ದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದೆ.

- Advertisement -

Related news

error: Content is protected !!