Saturday, June 28, 2025
spot_imgspot_img
spot_imgspot_img

ಕ್ವಾಡ್ ಶೃಂಗಸಭೆಗಾಗಿ ಅಮೆರಿಕದ ಫಿಲಡೆಲ್ಫಿಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ

- Advertisement -
- Advertisement -

ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂಜೆ ಫಿಲಡೆಲ್ಫಿಯಾ ತಲುಪಿದ್ದಾರೆ. ಪ್ರಧಾನಿ ಮೋದಿ ವಿಶ್ವಸಂಸ್ಥೆಯ ‘ಕ್ವಾಡ್ ಶೃಂಗಸಭೆ’ಗೂ ಮುನ್ನ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಅವರು ಭಾರತೀಯ ಸಮುದಾಯದ ಸಭೆಯನ್ನು ಉದ್ದೇಶಿಸಿ ಮತ್ತು ವಿಶ್ವಸಂಸ್ಥೆಯ ‘ಭವಿಷ್ಯದ ಶೃಂಗಸಭೆ’ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೆಹಲಿಯಿಂದ ಅಮೆರಿಕಕ್ಕೆ ಹೊರಡುವಾಗ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಭಾರತೀಯ ವಲಸಿಗರನ್ನು ಭೇಟಿಯಾಗಲು ಉತ್ಸುಕರಾಗಿದ್ದೇನೆ ಎಂದಿದ್ದರು.

ಮಹತ್ವದ ಅಮೇರಿಕಾ ಭೇಟಿಗೆ ತೆರಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಸಮೃದ್ಧಿಗಾಗಿ ಕೆಲಸ ಮಾಡಲು ಕ್ವಾಡ್ ಶೃಂಗಸಭೆ ವೇದಿಕೆಯಾಗಿ ಹೊರಹೊಮ್ಮಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರನ್ನು ಭೇಟಿ ಮಾಡಲು ಮತ್ತು ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದರು. ಮೋದಿ ಅವರು ತಮ್ಮ ಭೇಟಿಯ ಸಮಯದಲ್ಲಿ ನ್ಯೂಯಾರ್ಕ್‌ನ ಜನರಲ್ ಅಸೆಂಬ್ಲಿಯಲ್ಲಿ ಭಾರತೀಯ ಸಮುದಾಯದ ಸಭೆಯನ್ನು ಉದ್ದೇಶಿಸಿ ಮತ್ತು ವಿಶ್ವಸಂಸ್ಥೆಯ ‘ಭವಿಷ್ಯದ ಶೃಂಗಸಭೆ’ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇಂದು ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯಕ್ಕೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಲಿದ್ದಾರೆ. ನಂತರ ಮೋದಿ ಅವರು ತಮ್ಮ ಪ್ರವಾಸದ ಕೊನೆಯ ದಿನವಾದ ಸೆಪ್ಟೆಂಬರ್ 23 ರಂದು ವಿಶ್ವಸಂಸ್ಥೆಯ ‘ಭವಿಷ್ಯದ ಶೃಂಗಸಭೆ’ಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!