- Advertisement -
- Advertisement -





ಮೈದಾನದ ಗೇಟ್ ಮುರಿದು ತಲೆಗೆ ಬಿದ್ದು ಬಾಲಕ ಸಾವಿಗೀಡಾಗಿರುವ ಘಟನೆ ಮಲ್ಲೇಶ್ವರಂ ಬಿಬಿಎಂಪಿ ಗ್ರೌಂಡ್ನಲ್ಲಿ ನಡೆದಿದೆ.
ಮೃತ ಬಾಲಕನನ್ನು ನಿರಂಜನ್ (10) ಎಂದು ಗುರುತಿಸಲಾಗಿದೆ.
ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಟ ಆಡಲು ಬಾಲಕ ಮೈದಾನಕ್ಕೆ ಬಂದಿದ್ದ. ಈ ವೇಳೆ ಬಾಲಕ ಗೇಟ್ ಬಳಿಯೇ ನಿಂತಿದ್ದು, ಗೇಟ್ ತೆರೆಯುತ್ತಿದ್ದಂತೆ ಆತನ ತಲೆ ಮೇಲೆ ಮುರಿದು ಬಿದ್ದಿದೆ. ಪರಿಣಾಮವಾಗಿ ತಲೆಗೆ ತೀವ್ರ ಗಾಯವಾಗಿ ಬಾಲಕ ಮೃತಪಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.
- Advertisement -