- Advertisement -
- Advertisement -



ಪುತ್ತೂರು ಸುಳ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಅಪಘಾತ ಸಂಭವಿಸಿದ ಘಟನೆ ಮುರ ಸಮೀಪ ನಡೆದಿದೆ.
ಸುಳ್ಯದ ಆಸ್ಪತ್ರೆಯಿಂದ ಪುಟ್ಟ ಮಗುವೊಂದನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕೊಂಡೊಯ್ಯಲಾಗುತ್ತಿತ್ತು. ಈ ಸಂದರ್ಭ ಮುರ ಸಮೀಪ ದೋಸ್ತ್‌ವಾಹನ ಆ್ಯಂಬುಲೆನ್ಸ್‌ಗೆ ಡಿಕ್ಕಿಯಾಗಿದೆ. ಘಟನೆಯಿಂದ ಆ್ಯಂಬುಲೆನ್ಸ್‌ನಲ್ಲಿದ್ದ ಪುಟ್ಟ ಮಗು ಮತ್ತು ಚಾಲಕ ಗಾಯಗೊಂಡಿದ್ದಾರೆ. ತಕ್ಷಣ ಮಗುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ನೀಡಿ ಬದಲಿ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ಕಳುಹಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.
- Advertisement -








