- Advertisement -
- Advertisement -





2019ರ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೃತನನ್ನು ಕಾಕಪೋರಾದ ಹಾಜಿಬಲ್ ಗ್ರಾಮದ ಬಿಲಾಲ್ ಅಹ್ಮದ್ ಕುಚೇ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ 19 ಮಂದಿಯ ಮೇಲೆ ಆರೋಪ ಹೊರಿಸಲಾಗಿತ್ತು.
ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಆರೋಪಿ ಸೆ.17 ರಂದು ಕಿಶ್ತ್ವಾರ್ ಜಿಲ್ಲಾ ಕಾರಾಗೃಹದಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆತ ಸೋಮವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -