Saturday, June 28, 2025
spot_imgspot_img
spot_imgspot_img

ಉಡುಪಿ: ಶಾರ್ಟ್ ಸರ್ಕ್ಯೂಟ್‌ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ..!

- Advertisement -
- Advertisement -

ಉಡುಪಿ: ಚಲಿಸುತ್ತಿದ್ದ ಕಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಹಠಾತ್ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿಯ ಎಂಟಿಆರ್ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ ಕಾರನ್ನು ಚಲಾಯಿಸುತ್ತಿದ್ದಾಗ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಕೂಡಲೇ ವಾಹನವನ್ನು ನಿಲ್ಲಿಸಿ ಹೊರಬಂದರು.

ಬೆಂಕಿ ವೇಗವಾಗಿ ಕಾರಿನ ಮುಂಭಾಗಕ್ಕೆ ವ್ಯಾಪಿಸಿತು. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರಿನ ಬ್ಯಾಟರಿಯಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದ ತಾತ್ಕಾಲಿಕ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕಾರಿನ ಮುಂಭಾಗ ಬೆಂಕಿಗೆ ಆಹುತಿಯಾಗಿದೆ.

- Advertisement -

Related news

error: Content is protected !!