Tuesday, August 11, 2026
spot_imgspot_img
spot_imgspot_img

ಕುಂದಾಪುರ: ಟಿಪ್ಪ‌ರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಸಾವು..!

- Advertisement -
- Advertisement -

ಕುಂದಾಪುರ: ಟಿಪ್ಪ‌ರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿ ನಾಗೂರು ನಿವಾಸಿ, ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ (19) ಎಂದು ಗುರುತಿಸಲಾಗಿದೆ.

ಧನುಷ್ ಇಂದು ಮಧ್ಯಾಹ್ನ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಹಿಂದಿನಿಂದ ಬಂದ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!