- Advertisement -
- Advertisement -






ವಿಟ್ಲ: ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಹಾಗೂ ಶಿಕ್ಷಕರು ಜತೆಗೂಡಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಭಾರತದ ಸ್ವಾತಂತ್ರ್ಯಕ್ಕಾಗಿ ಬೆವರು ಸುರಿಸಿ ಹೋರಾಡಿದ ಕ್ರಾಂತಿವೀರರಾದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ಗೌರವ ಸಲ್ಲಿಸಲಾಯಿತು. ಹತ್ತನೇ ತರಗತಿಯ ವಿದ್ಯಾರ್ಥಿನಿ ಅಶ್ವಿನಿ ದಿನದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಹಾಡಿದರು. ಸ್ಕೌಟ್ & ಗೈಡ್ ಮಕ್ಕಳಿಂದ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಶಾಲಾ ಸಹ ಶಿಕ್ಷಕಿ ಐಡಾ ಹಾಗೂ ಭವ್ಯ ಶ್ರೀ ಸಹಕರಿಸಿದರು. ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಅಂಗವಾಗಿ ಸಿಹಿತಿಂಡಿ ವಿತರಿಸಲಾಯಿತು.
- Advertisement -