- Advertisement -
- Advertisement -




ಕುಂದಾಪುರ: ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿಯೋರ್ವರು ಆಯಾ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ಬೇಳೂರು ಕಂಬಳಗದ್ದೆ ಸಮೀಪ ಕೊಂಕಣ ರೈಲ್ವೆ ಮಾರ್ಗದಲ್ಲಿ ನಡೆದಿದೆ.
ಚಲಿಸುತ್ತಿರುವ ರೈಲಿನಿಂದ ಪ್ರಯಾಣಿಕನೊಬ್ಬ ಆಯಾತಪ್ಪಿ ಗದ್ದೆಗೆ ಉರುಳಿ ಬಿದ್ದು ತಲೆಗೆ ಗಂಭೀರ ಗಾಯಗೊಂಡ ಪ್ರಕರಣ ದಾಖಲಾಗಿದೆ.
ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ನೋಡಿದ ಮಹಿಳೆಯೊಬ್ಬರು ತಕ್ಷಣವೇ ಸ್ಥಳೀಯರಿಗೆ ಮಾಹಿತಿ ನೀಡಿದ್ದು, ಸ್ಥಳೀಯರು ಧಾವಿಸಿ ಉಡುಪಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
- Advertisement -