Monday, August 10, 2026
spot_imgspot_img
spot_imgspot_img

ಕಡಬ: ಬೈಕ್‌ಗೆ ಕಾರು ಢಿಕ್ಕಿ; ಬೈಕ್‌ ಸವಾರ ಮೃತ್ಯು…!

- Advertisement -
- Advertisement -

ಕಡಬ: ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.

ಮೃತಪಟ್ಟ ಬೈಕ್‌ ಸವಾರ ಕಡಬ ಹಳೇ ಸ್ಟೇಷನ್ ನಿವಾಸಿ ಕಡಬ ಸಿ.ಎಂ. ಬ್ಯಾಂಕ್‌‌ ಮಾಜಿ ಉದ್ಯೋಗಿ ಹಸೈನಾರ್ ಎಂದು ಗುರುತಿಸಲಾಗಿದೆ.

ಹಸೈನಾರ್ ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅಪಘಾತದ ದೃಶ್ಯ ಸ್ಥಳೀಯ ಇಂಡಸ್ಟ್ರೀಸ್ ಒಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

- Advertisement -

Related news

error: Content is protected !!