Monday, June 30, 2025
spot_imgspot_img
spot_imgspot_img

ಉಳ್ಳಾಲ : ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಾಳು ಬಾವಿಯಲ್ಲಿ ಪತ್ತೆ

- Advertisement -
- Advertisement -

ಉಳ್ಳಾಲ : ನಾಪತ್ತೆಯಾಗಿದ್ದ ಯುವಕನ ಮೃತದೇಹವು ಪಾಳು ಬಿದ್ದ ಬಾವಿಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ.

ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತ ಯುವಕ.

ಮೂಲತ: ಜಪ್ಪು,ಗೋರ್ದಂಡು ನಿವಾಸಿಯಾದ ಪ್ರಸಾದ್ ಕಳೆದ ಕೆಲ ವರ್ಷಗಳಿಂದ ಕುಟುಂಬ ಸಮೇತ ಕುಜುಮಗದ್ದೆಯಲ್ಲಿ ನೆಲೆಸಿದ್ದರು.‌ ಪೈಂಟರ್ ವೃತ್ತಿ ನಡೆಸುತ್ತಿದ್ದ ಪ್ರಸಾದ್ ಅವರು ಅವಿವಾಹಿತರಾಗಿದ್ದು ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋಗಿದ್ದರು ಎಂದು ತಿಳಿದುಬಂದಿದೆ.

ಪ್ರಸಾದ್ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ನಿನ್ನೆ ಮಧ್ಯಾಹ್ನ ನಾಪತ್ತೆಯಾಗಿದ್ದರು. ಈ ವೇಳೆ ಮನೆ ಮಂದಿ ನೆರೆಹೊರೆಯವರು ಹುಡುಕಾಡಿದಾಗ ಇಂದು ಬೆಳಿಗ್ಗೆ ಮನೆ ಹತ್ತಿರದ ಪಾಳು ಬಿದ್ದ ಬಾವಿಯ ಬಳಿ ಪ್ರಸಾದ್ ಅವರ ಪಾದರಕ್ಷೆ ದೊರೆತಿದ್ದು ಈ ಹಿನ್ನೆಲೆಯಲ್ಲಿ ಪಾಳು ಬಾವಿಯನ್ನು ಇಣುಕಿ ನೋಡಿದಾಗ ಪ್ರಸಾದ್ ಬಾವಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!