- Advertisement -
- Advertisement -




ಈಜಲು ತೆರಳಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ಅ. 8ರ ಮಂಗಳವಾರ ಸಂಜೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಸಮೀಪ ಕುಮತಿ ಗ್ರಾಮದಲ್ಲಿ ನಡೆದಿದೆ.
ಸಾಗರ್ (14), ಗುರು (14), ವಿನಯ್ (11) ಮೃತ ದುರ್ದೈವಿಗಳು.
ಕಾನಾ ಹೊಸಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ 1 ವಾರದಿಂದ ಸತತವಾಗಿ ಸುರಿದ ಮಳೆಯಿಂದಾಗಿ ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ.
ಕುಮತಿ ಗ್ರಾಮದ ಪಕ್ಕದ ಹಳ್ಳದಲ್ಲಿ ನೀರು ಬಂದಿದ್ದು, ದಸರಾ ರಜೆಯಿದ್ದ ಕಾರಣ 3 ಬಾಲಕರು ಈಜಾಡಲು ತೆರಳಿದ್ದು, ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.
ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನಾ ಸ್ಥಳಕ್ಕೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
- Advertisement -