Saturday, June 28, 2025
spot_imgspot_img
spot_imgspot_img

ಬೈಕ್‌ಗೆ ಅಪರಿಚಿತ ವಾಹನ ಢಿಕ್ಕಿ; ತಾಯಿ-ಮಗ ಸಾವು..!

- Advertisement -
- Advertisement -

ಕೋಲಾರ: ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ತಾಯಿ-ಮಗ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಕೆರೆ ಕ್ರಾಸ್‌ನಲ್ಲಿ ನಡೆದಿದೆ.

ಮೃತಪಟ್ಟವರನ್ನು ಕೇತಗಾನಹಳ್ಳಿ ಗ್ರಾಮದ ನಿವಾಸಿಗಳಾದ ಪದ್ಮಮ್ಮ (48), ರಘು (26) ಎಂದು ಗುರುತಿಸಲಾಗಿದೆ.

ಶ್ರೀನಿವಾಸಪುರ ಪಟ್ಟಣದಿಂದ ಸ್ವಗ್ರಾಮ ಕೇತಗಾನಹಳ್ಳಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಅಪರಿಚಿತ ವಾಹನ ಪತ್ತೆಗಾಗಿ ಪೊಲೀಸರು ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!