Sunday, June 14, 2026
spot_imgspot_img
spot_imgspot_img

ಚೆನ್ನೈ ಬಳಿ ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ : ಹೊತ್ತಿ ಉರಿದ ಬೋಗಿಗಳು

- Advertisement -
- Advertisement -

ತಮಿಳುನಾಡಿನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಗೂಡ್ಸ್ ರೈಲಿಗೆ ಎಕ್ಸ್​ಪ್ರೆಸ್​ ರೈಲು ಡಿಕ್ಕಿ ಹೊಡೆದ ಕಾರಣ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲಿ ಹಲವು ಜನರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತಿದೆ. ಮೈಸೂರು-ದರ್ಭಾಂಗ್ ಎಕ್ಸ್‌ಪ್ರೆಸ್ ರೈಲು ಚೆನ್ನೈ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಗಳು ತಿಳಿಸಿವೆ.

ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್ ರೈಲು, ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ಎರಡು ಬೋಗಿಗಳು ಹೊತ್ತಿ ಉರಿದಿವೆ.

ಶುಕ್ರವಾರ ಮೈಸೂರಿನಿಂದ ದರ್ಭಾಂಗ್‌ಗೆ ಭಾಗಮತಿ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಸುತ್ತಿತ್ತು. ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಭಾಗಮತಿ ಎಕ್ಸ್‌ಪ್ರೆಸ್‌ ರೈಲಿನ ಆರು ಬೋಗಿಗಳು ಹಳಿತಪ್ಪಿದ್ದು, 2 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅಪಘಾತಕ್ಕೆ ಸಂಬಂಧಿಸಿದಂತೆ ತಿರುವಳ್ಳೂರು ಜಿಲ್ಲಾಧಿಕಾರಿ ಟಿ.ಪ್ರಭುಶಂಕರ್ ಮಾತನಾಡಿ, ರಕ್ಷಣಾ ಕಾರ್ಯಚಾರಣೆ ನಡೆಯುತ್ತಿದ್ದು, ಸಾವು-ನೋವಿನ ಬಗ್ಗೆ ಯಾವುದೇ ರೀತಿಯ ಮಾಹಿತಿ ಲಭಿಸಿಲ್ಲ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!