- Advertisement -
- Advertisement -



ಜಯ ಕರ್ನಾಟಕ ಜನಪರ ವೇದಿಕೆ ಉಡುಪಿ ಜಿಲ್ಲೆ “ಜನನಿ” ದಿವಾಕರ ಶೆಟ್ಟಿಯವರ ನೇತೃತ್ವದಲ್ಲಿ ವಿಘ್ನಹತ್ರ ಸಂಸ್ಥೆಯ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ ಕಾರ್ಯಕ್ರಮವು ಅ. 25 ಮತ್ತು ಅ.26 ರಂದು ವಿಘ್ನಹತ್ರ ಶ್ರವಣ ಚಿಕಿತ್ಸಾಲಯ, ಉಡುಪಿಯಲ್ಲಿ ನಡೆಯಲಿದೆ.

ಜಯ ಕರ್ನಾಟಕ ಜನಪರ ವೇದಿಕೆ, ಉಡುಪಿ ಜಿಲ್ಲೆ ಅನೇಕ ಸಾಮಾಜಿಕ ಕಾರ್ಯವನ್ನು ಮುಂದುವರೆಸಿಕೊಂಡು ಬರುತ್ತಿದ್ದು, ಈಗ ಅವರು ವಿಘ್ನಹತ್ರ ಶ್ರವಣ ಚಿಕಿತ್ಸಾಲಯ ಸಹಯೋಗದೊಂದಿಗೆ ಶ್ರವಣದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರವನ್ನು ಮಾಡುತ್ತಿದ್ದು ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ತಮ್ಮ ಸಂಸ್ಥೆಯಾದ ಜಯ ಕರ್ನಾಟಕ ಜನಪರ ವೇದಿಕೆ, ಉಡುಪಿ ಜಿಲ್ಲೆ, ಶ್ರವಣದ ಯಂತ್ರಕ್ಕೆ ಆಗುವ ವೆಚ್ಚದ ಶೇಕಡಾ 40% ಮೊತ್ತವನ್ನು ಭರಿಸಲಾಗುತ್ತಿದ್ದು, ರೋಗಿಗಳು ಇದರ ಉಪಯೋಗವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸೂಚನೆಗಳು:
- ನೋಂದಣಿ ಕಡ್ಡಾಯವಾಗಿದೆ.
- ಹಿರಿಯರಿಗೆ ಮೊದಲ ಆದ್ಯತೆ ( ಕಂತುಗಳಲ್ಲಿ ಪಾವತಿಸಬಹುದಾಗಿದೆ. )
- ಶ್ರವಣ ಪರೀಕ್ಷೆಯ ಯಾವುದಾದರೂ ಹಳೆಯ ವರದಿ ಇದ್ದರೆ ಜೊತೆಯಲ್ಲಿ ತನ್ನಿ.
- ಮೊದಲು ನೋಂದಾಯಿಸುವ 15 ಜನರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.
- ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.
- ವೇದಿಕೆಯವರು ದೇಖೆಗೆ ಮೊತ್ತದಿಂದ 40% ಶ್ರವಣ ಸಾಧನದ ಮೊತ್ತವನ್ನು ಪಾವತಿಸುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -