Sunday, June 29, 2025
spot_imgspot_img
spot_imgspot_img

ಚೆನ್ನೈ-ಬೆಳಗಾವಿ ವಿಮಾನಕ್ಕೆ ಬಾಂಬ್ ಬೆದರಿಕೆ; ವಿಮಾನ ಸಂಪರ್ಕ ಕಡಿತ

- Advertisement -
- Advertisement -

ಬೆಳಗಾವಿ: ಚೆನ್ನೈ-ಬೆಳಗಾವಿ ವಿಮಾನಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಚೆನ್ನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಮೇಲ್​ ಬಂದಿದೆ. ಚೆನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿ ಏರ್​ಪೋರ್ಟ್​ ಅಥಾರಿಟಿಗೆ ಮೇಲ್ ಬಂದಿದೆ ಎನ್ನಲಾಗಿದೆ. ಆದುದರಿಂದ ಬೆಳಗಾವಿಗೆ ಚೆನೈನಿಂದ ವಿಮಾನ ಸಂಪರ್ಕವನ್ನು ಕಡಿತಗೊಳಸಲಾಗಿದೆ. ಈ ಬಗ್ಗೆ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇ ಮೇಲ್ ಎಲ್ಲಿಂದ ಬಂದಿದೆ? ಯಾರು ಕಳುಹಿಸಿದ್ದಾರೆ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗಿನ ಹುಸಿಬಾಂಬ್ ಬೆದರಿಕೆ ಕರೆಗಳು ಸಂದೇಶಗಳು ವಿಮಾನಯಾನ ಸಂಸ್ಥೆಗಳು ಹಾಗೂ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು ಸೂಕ್ತ ಕ್ರಮ ವಹಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

- Advertisement -

Related news

error: Content is protected !!