- Advertisement -
- Advertisement -




ಕಾರ್ಕಳ: ಧರ್ಮಸ್ಥಳ ಶ್ರೀ ಕ್ಷೇತ್ರಕ್ಕೆ ತೀರ್ಥಯಾತ್ರೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಅಜೆಕಾರು ಎಂಬಲ್ಲಿ ಇಂದು ನಡೆದಿದೆ .
ಹುಬ್ಬಳ್ಳಿ ಮೂಲದ ಆರು ಮಂದಿ ಇನೋವಾ ಕಾರಿನಲ್ಲಿ ಆಗುಂಬೆಯಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಅಜೆಕಾರು ಸಮೀಪದ ರಾಜ್ಯ ಹೆದ್ದಾರಿಯ ಸೇತುವೆಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗಾಯಗೊಂಡವರನ್ನು ಮಂಜುನಾಥ್ ಗೌಡ (28), ಆತ್ಮಾನಂದ (24) ಹನುಮಂತ್ ಗೌಡ (23) ಹಾಲಪ್ಪ ಗೌಡ (24) ವೀರಭದ್ರಗೌಡ (28) ಬಸನಗೌಡ( 27) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಅಜೆಕಾರು108 ಆಂಬುಲೆನ್ಸ್ ಸಿಬ್ಬಂದಿ ಅಗಮಿಸಿ ಗಾಯಾಳುಗಳನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. 108 ಅಂಬುಲೆನ್ಸ್ ಸಿಬ್ಬಂದಿ ಪೈಲೆಟ್ ನಾಗರಾಜ್ ಅಂಗಡಿ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಬಗ್ಗೆಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








