Friday, June 27, 2025
spot_imgspot_img
spot_imgspot_img

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು: ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ.

ಪ್ರಜ್ವಲ್ ರೇವಣ್ಣ ಅವರು ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮೂರು ಅರ್ಜಿಗಳನ್ನು ವಜಾಗೊಳಿಸಿ ತೀರ್ಪು ನೀಡಿದೆ.

ಪ್ರಜ್ವಲ್ ರೇವಣ್ಣ ಅವರು ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರು ಹಾಗೂ ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು.

- Advertisement -

Related news

error: Content is protected !!