Saturday, June 28, 2025
spot_imgspot_img
spot_imgspot_img

KSRTC ಬಸ್​ ಪಲ್ಟಿ ಓರ್ವ ಮಹಿಳೆ ಮೃತ್ಯು, 20ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಕೆಎಸ್​​ಆರ್​ಟಿಸಿ (KSRTC) ಬಸ್​ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಸತ್ತೂರು ಗ್ರಾಮದ ಬಳಿ ನಡೆದಿದೆ.

ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಸುತ್ತೂರು ಗ್ರಾಮದ ಹನುಮಕ್ಕ (45) ಮೃತ ಮಹಿಳೆ.

ಬಸ್​ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆಯಿಂದ ಹರಪ್ಪನಹಳ್ಳಿ ಕಡೆ ಕೆಎಸ್​ಆರ್​ಟಿಸಿ ಬಸ್​ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ.ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

- Advertisement -

Related news

error: Content is protected !!