- Advertisement -
- Advertisement -




ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಅಲ್ಲದೇ ಎಲ್ಲಾ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶಿಸಿರುವ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲೇ ಸಿಬಿಐ ಅಧಿಕಾರಿಗಳು ಸೈಲ್ ರನ್ನು ವಶಕ್ಕೆ ಪಡೆದಿದ್ದಾರೆ.
ಸೀಜ್ ಮಾಡಿದ್ದ ಸುಮಾರು 11, 312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಅಪರಾಧಿಗಳಾದ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಸತೀಶ್ ಸೈಲ್ ಸೇರಿದಂತೆ ಮೂವರು ಆರೋಪಿಗಳಿಗೆ ಇಂದು ಕೋರ್ಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.
- Advertisement -