Sunday, June 29, 2025
spot_imgspot_img
spot_imgspot_img

ಕಾಪು: ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!

- Advertisement -
- Advertisement -

ಕಾಪು: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದಿಂದ ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಅ. 22ರಂದು ಕೇರಳದ ಕಣ್ಣೂರು ಏರ್‌ಪೋರ್ಟ್‌ನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಅಶ್ಮತ್ ಅಲಿ(35) ಎಂದು ಗುರುತಿಸಲಾಗಿಸದೆ.

ಆರೋಪಿ ಅಶ್ಮತ್ ಅಲಿ ವಿರುದ್ಧ 2019ರಲ್ಲಿ ಕಾಪು ಪೊಲೀಸ್ ಠಾಣೆಯಲ್ಲಿ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿ ಅದನ್ನು ವೀಡಿಯೋ ಮಾಡಿ ಬ್ಲಾಕ್‌ಮೇಲ್ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿಯು ಉಡುಪಿಯ 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ 2019ರ ಸೆ. 6ರಂದು ಜಾಮೀನು ಪಡೆದು ಬಿಡುಗಡೆ ಹೊಂದಿದ್ದ.

ಆರೋಪಿಯ ವಿರುದ್ಧ 18 ಬಾರಿ ಬಂಧನ ವಾರಂಟ್ ಹೊರಡಿಸಲಾಗಿತ್ತು. ಅ. 21ರಂದು ಈತ ಕಣ್ಣೂರು ಮಟ್ಟನೂರ್ ಏರ್‌ಪೋರ್ಟ್‌ಗೆ ಬಂದಿಳಿದಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ.

- Advertisement -

Related news

error: Content is protected !!