- Advertisement -
- Advertisement -






ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊ್ಗ್ಗದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕಮಲಾ (35) ಎಂದು ಗುರುತಿಸಲಾಗಿದೆ.
ಮೃತ ಮಹಿಳೆ ಕಮಲಾ ಸೋಮವಾರ ರಾತ್ರಿ ಪತಿಯೊಂದಿಗೆ ಜಗಳವಾಡಿ ಮನೆಯಿಂದ ಹೊರ ಹೋಗಿದ್ದರು. ಬಳಿಕ ತಾಳಗುಪ್ಪ – ಬೆಂಗಳೂರು ಮಧ್ಯೆ ಸಂಚರಿಸುವ ರೈಲಿಗೆ ತಲೆಕೊಟ್ಟು ಕಮಲಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತ ಕಮಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ವಿನೋಬನಗರ ಹಾಗೂ ರೈಲ್ವೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.
- Advertisement -