- Advertisement -
- Advertisement -



ಉಡುಪಿ: ಯುವಕನೋರ್ವ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ಯುವಕ ಕುಂದಾಪುರ ತಾಲೂಕು ಹಟ್ಟಿಯಂಗಡಿ ಗ್ರಾಮ ಹಟ್ಟಿಯಂಗಡಿ ಕ್ರಾಸ್ಟೆಂಟ್ ಹೌಸ್ ನಿವಾಸಿ ಸಂತೋಷ ಭರತ ಸಾಳುಂಕೆ (26) ಎಂದು ಗುರುತಿಸಲಾಗಿದೆ.
ಭರತ ಸಾಳುಂಕೆ ನ.5ರಿಂದ ನಾಪತ್ತೆಯಾಗಿದ್ದಾರೆ. 5 ಅಡಿ 8 ಇಂಚು ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂ.ಸಂಖ್ಯೆ: 0820- 2526444, ಕುಂದಾಪುರ ವೃತ್ತ ಕಚೇರಿ ದೂ.ಸಂಖ್ಯೆ: 08254-230880, ಕುಂದಾಪುರ ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08254-232338, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-237100 ಹಾಗೂ ಪಿಎಸ್ಐ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಮೊ.ನಂ: 9480805468 ಅನ್ನು ಸಂಪರ್ಕಿಸಬಹುದು ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
- Advertisement -