Thursday, June 18, 2026
spot_imgspot_img
spot_imgspot_img

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಚಿವ ಜಮೀರ್‌ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್‌ ಜಾರಿ

- Advertisement -
- Advertisement -

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್‌ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಇ.ಡಿ ದಾಳಿಯ ನಂತರ ಜಮೀರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಅಕ್ರಮ ಆಸ್ತಿ ಗಳಿಕೆ ಸಂಬಂಧ ತನಿಖೆ ನಡೆಸುವಂತೆ ಇ.ಡಿ ಸೂಚನೆ ನೀಡಿತ್ತು. ಈ ಬಗ್ಗೆ ಕಳೆದೆರಡು ವರ್ಷಗಳಿಂದ ಲೋಕಾಯುಕ್ತ ತನಿಖೆ ನಡೆಸುತ್ತಿದೆ.

ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್‌ಪಿ ಜಮೀರ್‌ ಅಹ್ಮದ್‌ಗೆ ನೋಟಿಸ್‌ ನೀಡಿದ್ದಾರೆ. ಈ ಹಿಂದೆ ದಾಖಲೆ ಸಲ್ಲಿಸುವಂತೆ ನೋಟಿಸ್ ನೀಡಲಾಗಿತ್ತು. ಇದೀಗ ಹಾಜರಾಗಿ ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ.

- Advertisement -

Related news

error: Content is protected !!