- Advertisement -
- Advertisement -


ಹೊಸದಿಲ್ಲಿ : ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟದ ಜಯವು ಉತ್ತಮ ಆಡಳಿತಕ್ಕೆ ಅಭಿವೃದ್ಧಿಗೆ ಸಂದ ಜಯ. ಎನ್ ಡಿ ಎ ಯು ಮಹಾರಾಷ್ಟ್ರದ ಪ್ರಗತಿಗೆ ಶ್ರಮಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎನ್ ಡಿ ಯು ನೇತೃತ್ವದ ಮಹಾಯುತಿ ಮೈತ್ರಿಕೂಟವು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಹಮತ ಗಳಿಸುವ ಮೂಲಕ ಜಯಭೇರಿ ಬಾರಿಸಿದ ಬಳಿಕ, ಎಕ್ಸ್ ಸಾಮಾಜಿಕ ಜಾಲತಣದಲ್ಲಿ ಪೋಸ್ಟ್ ಮಾಡಿರುವ, ಅವರು ಮಹಾರಾಷ್ಟ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.“ಎನ್ಡಿಎಗೆ ಐತಿಹಾಸಿಕ ಜನಾದೇಶಕ್ಕಾಗಿ ಮಹಾರಾಷ್ಟ್ರದ ನನ್ನ ಸಹೋದರಿಯರು ಮತ್ತು ಸಹೋದರರಿಗೆ, ವಿಶೇಷವಾಗಿ ರಾಜ್ಯದ ಯುವಕರು ಮತ್ತು ಮಹಿಳೆಯರಿಗೆ ಹೃತೂರ್ವಕ ಕೃತಜ್ಞತೆಗಳು. ಈ ವಾತ್ಸಲ್ಯಕ್ಕೆ ಸಾಟಿಯಿಲ್ಲ. ನಮ್ಮ ಮೈತ್ರಿಯು ಮಹಾರಾಷ್ಟ್ರದ ಪ್ರಗತಿಗೆ ಶ್ರಮಿಸುತ್ತದೆ ಎಂದು ನಾನು ಜನರಿಗೆ ಭರವಸೆ ನೀಡುತ್ತೇನೆ. ಜೈ ಮಹಾರಾಷ್ಟ್ರ!” ಎಂದು ಅವರು ತಮ್ಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
- Advertisement -