Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಆತ್ಯಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಮಿತ್ತಬಾಗಿಲಿನ ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಋಷ್ಟಿ (17) ಎಂದು ತಿಳಿದು ಬಂದಿದೆ.ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದಾಳೆ ಎನ್ನಲಾಗಿದೆ.

ತಕ್ಷಣ ಆಕೆಯನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.ಈ ಕುರಿತು ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!