Friday, June 5, 2026
spot_imgspot_img
spot_imgspot_img

ಬೆಳ್ಳಾರೆ ಠಾಣೆಗೆ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಭೇಟಿ; ಪೊಲೀಸ್ ವಸತಿಗೃಹದ ನೂತನ ಕಟ್ಟಡ ಪರಿಶೀಲನೆ

- Advertisement -
- Advertisement -

ಬೆಳ್ಳಾರೆ: ಬೆಳ್ಳಾರೆ ಪೊಲೀಸ್‌ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಅವರು ಬುಧವಾರ ಭೇಟಿ ನೀಡಿದರು.

ಠಾಣೆಗೆ ಭೇಟಿ ನೀಡಿದ ಬಳಿಕ ಅವರು ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನಿರ್ಮಾಣವಾಗುತ್ತಿರುವ ವಸತಿ ಗೃಹದ ನೂತನ ಕಟ್ಟಡವನ್ನು ಪರಿಶೀಲನೆ ನಡೆಸಿ, ಸೂಕ್ತ ಸಲಹೆ- ಸೂಚನೆಗಳನ್ನು ನೀಡಿದರು. ಹಾಗೂ ನಿರ್ಮಾಣ ಮಾಡುತ್ತಿರುವ ಸಂಸ್ಥೆ ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಠಾಣೆಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳು, ಸಿಬ್ಬಂದಿಗಳಿಗೆ ಮಾರ್ಗದರ್ಶನಗಳನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಅಧೀಕ್ಷಕ ಡಾ.ರಾಜೇಂದ್ರ, ಪುತ್ತೂರು ಡಿವೈಎಸ್‌ಪಿ ಡಾ.ಅರುಣ್‌ನಾಗೇಗೌಡ, ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ, ಬೆಳ್ಳಾರೆ ಠಾಣಾ ಉಪ ನಿರೀಕ್ಷಕ ಈರಯ್ಯ ಠಾಣೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!