Sunday, June 7, 2026
spot_imgspot_img
spot_imgspot_img

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು- ಅಪರಿಚಿತರಿಂದ ಬೆದರಿಕೆ ಕರೆ

- Advertisement -
- Advertisement -

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಮುಂಬೈ ಟ್ರಾಫಿಕ್​ ಕಂಟ್ರೋಲ್​ ರೂಂಗೆ ಅಪರಿಚಿತರೊಬ್ಬರು ಕರೆ ಮಾಡಿದ್ದಾರೆ.

ಕರೆ ಮಾಡಿದವರನ್ನು ಮಹಿಳೆ ಎಂದು ಗುರುತಿಸಲಾಗಿದೆ. ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕೆಯನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ, ಅಧಿಕಾರಿಗಳು ಕಾರ್ಯವಿಧಾನಗಳನ್ನು ಅನುಸರಿಸಿ ತನಿಖೆಯನ್ನು ಮುಂದುವರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಇದೇ ರೀತಿಯ ಬೆದರಿಕೆ ಕರೆ ಬಂದಿತ್ತು, ಅದರಲ್ಲಿ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಎಚ್ಚರಿಕೆ ನೀಡಲಾಗಿತ್ತು.

- Advertisement -

Related news

error: Content is protected !!