


ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ, ಇದರ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ರೆಡ್ ರಿಬ್ಬನ್ ಕ್ಲಬ್, ರೋವರ್ ಮತ್ತು ರೇಂಜರ್ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ರಕ್ತ ನಿಧಿ ಕೇಂದ್ರ, ಸರಕಾರಿ ಲೇಡಿಗೋಷನ್ ಆಸ್ಪತ್ರೆ, ಮಂಗಳೂರು, ಹೆಚ್. ಡಿ. ಎಫ್. ಸಿ ಬ್ಯಾಂಕ್ ಪುತ್ತೂರು, ಲಯನ್ಸ್ ಕ್ಲಬ್ ವಿಟ್ಲ ಹಾಗೂ ರೋಟರಿ ಕ್ಲಬ್ ವಿಟ್ಲ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಪದ್ಮನಾಭ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜಿನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಅಶ್ರಫ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಪ್ರವೀಣ್ ಕುಮಾರ್, ಜಿಲ್ಲಾ ಸಂಯೋಜಕರು, ರಕ್ತ ನಿಧಿ ಕೇಂದ್ರ, ಸರಕಾರಿ ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಇವರು ರಕ್ತದಾನದ ಮಹತ್ವದ ಕುರಿತು ತಿಳಿಸಿದರು.
ಕಾರ್ಯಕ್ರಮದಲ್ಲಿ ಲಯನ್ ರಜಿತ್ ಆಳ್ವ, ಅಧ್ಯಕ್ಷರು ಲಯನ್ಸ್ ಕ್ಲಬ್ ವಿಟ್ಲ, ಹಾಗೂ ರೊಟೇರಿಯನ್ ಹರೀಶ್ ಸಿ. ಹೆಚ್, ಅಧ್ಯಕ್ಷರು, ರೋಟರಿ ಕ್ಲಬ್ ವಿಟ್ಲ ಇವರು ಶುಭಹಾರೈಸಿದರು. ಅತಿಹೆಚ್ಚು ಬಾರಿ ರಕ್ತದಾನಗೈದಂತಹ ಕಾಲೇಜಿನ ವಿದ್ಯಾರ್ಥಿಗಳಾದ ಮಹಮ್ಮದ್ ಸಿನಾನ್ ಮತ್ತು ರೋಶನ್ ಇವರನ್ನು ಈ ಕಾರ್ಯಕ್ರಮದಲ್ಲಿ ಗುರುತಿಸಲಾಯಿತು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ವಿಟ್ಲ, ರೋಟರಿ ಕ್ಲಬ್ ವಿಟ್ಲದ ಸದಸ್ಯರು, ಕಾಲೇಜಿನ ಉಪನ್ಯಾಸಕರು, ಉಪನ್ಯಾಸಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್ ರಿಬ್ಬನ್ ಕ್ಲಬ್‌ನ ಯೋಜನಾಧಿಕಾರಿ ಡಾ. ಜ್ಯೋತಿ ಪಿ.ಯಸ್ ಸ್ವಾಗತಿಸಿದರು, ಯುವ ರೆಡ್ ಕ್ರಾಸ್ ಘಟಕದ ಸಂಚಾಲಕ ಪ್ರೊ ಶಶಿಕಲಾ ವಂದಿಸಿದರು. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು. ಈ ಶಿಬಿರದಲ್ಲಿ. 50 ಮಂದಿ ರಕ್ತದಾನವನ್ನು ಮಾಡಿದರು.