Saturday, June 6, 2026
spot_imgspot_img
spot_imgspot_img

ಸಚಿವ ಸ್ಥಾನಕ್ಕೆ ನೀಡಿದ ರಾಜೀನಾಮೆ ಅಂಗೀಕಾರ-ದೆಹಲಿಗೆ ತೆರಳಿದ ಸಿ.ಟಿ. ರವಿ

- Advertisement -
- Advertisement -

ಬೆಂಗಳೂರು(ನ.8): ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸ್ಥಾನಕ್ಕೆ ತಾವು ನೀಡಿದ್ದ ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ ಸಿಟಿ ರವಿ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಅವರು ವರಿಷ್ಠರೊಂದಿಗೆ ಪಕ್ಷದ ಜವಾಬ್ದಾರಿ ಬಗ್ಗೆ ಮಾತನಾಡಲಿದ್ದಾರೆ.

ಸಿ ಟಿ ರವಿ ಅವರು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದರು. ಇತ್ತೀಚೆಗೆ ನಡೆದ ಪಕ್ಷದ ಪುನಾರಚನೆಯಲ್ಲಿ ಅವರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಲಾಗಿತ್ತು. ಪಕ್ಷದ ಹೊಣೆಗಾರಿಕೆ ಮತ್ತು ಸಚಿವ ಸ್ಥಾನ ಎರಡನ್ನೂ ಏಕಕಾಲಕ್ಕೆ ನಿಭಾಯಿಸಲು ಸಾಧ್ಯವಿಲ್ಲದ ಕಾರಣಕ್ಕೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದರು. ಹಲವು ದಿನಗಳವರೆಗೆ ಅವರ ರಾಜೀನಾಮೆ ಅಂಗೀಕಾರವಾಗಿರಲಿಲ್ಲ. ನಿನ್ನೆ ಅಂಗೀಕಾರವಾಗಿದೆ.

- Advertisement -

Related news

error: Content is protected !!