Friday, June 27, 2025
spot_imgspot_img
spot_imgspot_img

ಸುಳ್ಯ: ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ: ಪ್ರಕರಣ ದಾಖಲು

- Advertisement -
- Advertisement -

ಸುಳ್ಯ: ವ್ಯಕ್ತಿಯೋರ್ವ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದು, ಪೊಲೀಸರು ವಿಚಾರಣೆ ನಡೆಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣ ಬಳಿ ಓರ್ವ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದು, ಸುಳ್ಯ ಪೊಲೀಸ್‌ ಠಾಣೆಯ ಉಪನಿರೀಕ್ಷಕರು ಸಂತೋಷ್‌ ಬಿ.ಪಿ ಯವರು ಈತನನ್ನು ವಿಚಾರಿಸಿದಾಗ ಈತನು ತನ್ನ ಹೆಸರು ಧನರಾಜ್ ಎ ( 30 ವರ್ಷ) ಎಂದು ಹೇಳಿರುತ್ತಾನೆ.

ಈ ವ್ಯಕ್ತಿಯು ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಈತನನ್ನು ವೈದ್ಯಕೀಯ ಪರೀಕ್ಷೆಗಾಗಿ ಪುತ್ತೂರು ತಾಲೂಕು ಸರಕಾರಿ ಆಸ್ವತ್ರೆಗೆ ಒಳಪಡಿಸಲಾಗಿತ್ತು. ಈ ವೇಳೆ ವೈದ್ಯಕೀಯ ಪರೀಕ್ಷೆಯಲ್ಲಿ ಆರೋಪಿತನು ನಿಷೇಧಿತ ಅಮಲು ಪದಾರ್ಥವಾದ ಗಾಂಜಾವನ್ನು ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣಾ ಅ,ಕ್ರ ನಂ: 132/2024 ಕಲಂ:27(ಬಿ) ಎನ್.ಡಿ.ಪಿ.ಎಸ್ ಆಕ್ಟ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!