Sunday, June 29, 2025
spot_imgspot_img
spot_imgspot_img

ಕಡಲ ತೀರದಲ್ಲಿ ಕುಳಿತು ಯೋಗ ಮಾಡುತ್ತಿದ್ದ ವೇಳೆ ಅಪ್ಪಳಿಸಿದ ಅಲೆ; ನೀರಲ್ಲಿ ಕೊಚ್ಚಿ ಹೋದ ನಟಿ..!

- Advertisement -
- Advertisement -

ಥಾಯ್ಲೆಂಡ್: ಸಮುದ್ರದ ತೀರದಲ್ಲಿನ ಬಂಡೆಗಳ ಮೇಲೆ ಕುಳಿತು ಪ್ರಾಣಾಯಾಮ ಸೇರಿದಂತೆ ಯೋಗಾಭ್ಯಾಸದಲ್ಲಿ ನಿರತಳಾಗಿದ್ದ 24 ವರ್ಷದ ರಷ್ಯಾದ ಖ್ಯಾತ ನಟಿ ಕ್ಯಾಮಿಲ್ಲಾ ಬೆಲ್ಲಾಟಸ್ಕಾಯ ಮೇಲೆ ಭೀಕರ ಸಮುದ್ರದ ಅಲೆಗಳು ಅಪ್ಪಳಿಸಿ, ಆ ಅಲೆಯ ಅಬ್ಬರಕ್ಕೆ ಕೊಚ್ಚಿ ಹೋಗಿ ನಟಿ ದುರಂತ ಅಂತ್ಯ ಕಂಡಿದ್ದಾಳೆ.

ನಟಿ ಕ್ಯಾಮಿಲ್ಲಾ ಪ್ರತಿ ದಿನ ಯೋಗ ಮಾಡುತ್ತಾ ದೈಹಿಕವಾಗಿ ಹಾಗೂ ಮಾನಸಿಕವಾಗಿ ಫಿಟ್ ಆಗಿದ್ದಳು. ಇದರಿಂದ ಜೀವನ ಸಂಪೂರ್ಣ ಬದಲಾಗಿರುವುದಾಗಿ ಕ್ಯಾಮಿಲ್ಲಾ ಹೇಳಿಕೊಂಡಿದ್ದರು. ರಷ್ಯಾ ನಟಿ ಕ್ಯಾಮಿಲ್ಲಾ ತನ್ನ ಬಾಯ್‌ಫ್ರೆಂಡ್ ಜೊತೆ ಸೇರಿ ಥಾಯ್ಲೆಂಡ್ ಪ್ರವಾಸದಲ್ಲಿರುವಾಗ ಈ ಘಟನೆ ನಡೆದಿದೆ. ಚಿತ್ರ ಸೇರಿದಂತೆ ಹಲವು ಬ್ಯೂಸಿ ಶೆಡ್ಯೂಲ್ ಬಳಿಕ ನಟಿ ಥಾಯ್ಲೆಂಡ್‌ನ ಕೊಹ್ ಸಮುಯಿ ದ್ವೀಪಕ್ಕೆ ಭೇಟಿ ನೀಡುವುದು ಹೆಚ್ಚಾಗಿತ್ತು. ಇದರಂತೆ ಈ ಬಾರಿಯೂ ಪ್ರವಾಸ ಮಾಡುತ್ತಿದ್ದ ವೇಳೆ ದುರಂತ ನಡೆದುಹೋಗಿದೆ.

ಕೊಹ್ ಸಮುಯಿ ದ್ವೀಪದ ಸಮುದ್ರದ ತೀರದಲ್ಲಿನ ಬಂಡೆ ಕಲ್ಲಿನ ಮೇಲೆ ಕುಳಿತು ಪ್ರಾಣಾಯಾಮ ಮಾಡುತ್ತಿದ್ದ ವೇಳೆ ಭೀಕರ ಅಲೆ ಅಪ್ಪಳಿಸಿದೆ. ಏನಾಗುತ್ತಿದೆ ಎನ್ನುವಷ್ಟರಲ್ಲಿ ನಟಿ ಸಮುದ್ರ ಅಲೆಗೆ ಕೊಚ್ಚಿ ಹೋಗಿದ್ದಾರೆ. ಪಕ್ಕದ ಬಂಡೆ ಕಲ್ಲಿನ ಮೇಲಿದ್ದ ಪ್ರವಾಸಿಗರು ನಟಿಯನ್ನು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಸಾಧ್ಯವಾಗಿಲ್ಲ. ದೈತ್ಯ ಅಲೆಯಿಂದ ನಟಿ ಕೊಚ್ಚಿ ಹೋಗಿದ್ದಾಳೆ. ತಕ್ಷಣವೆ ಕೋಸ್ಟಲ್ ಪೊಲೀಸರು ಆಗಮಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ಆದರೆ ರಕ್ಕಸ ಅಲೆಗಳ ಪ್ರಮಾಣ ಹೆಚ್ಚಾದ ಕಾರಣ ಕಾರ್ಯಾಚರಣೆಗೂ ಅಡ್ಡಿಯಾಗಿದೆ.

ಸತತ ಕಾರ್ಯಾಚರಣೆ ಬಳಿಕ ಪೊಲೀಸರು ಕಿ.ಮೀ. ದೂರದಲ್ಲಿ ರಷ್ಯಾ ನಟಿ ಕ್ಯಾಮಿಲ್ಲಾ ಮೃತದೇಹ ಪತ್ತೆಯಾಗಿದೆ. ಕ್ಯಾಮಿಲ್ಲಾ ದುರಂತ ಅಂತ್ಯ ಕಂಡ ಅದೇ ಬಂಡೆ ಕಲ್ಲಿನ ಮೇಲೆ ಹಲವು ಬಾರಿ ಯೋಗ ಮಾಡುತ್ತಿದ್ದಳು. ಕ್ಯಾಮಿಲ್ಲಾ ಅತೀ ಹೆಚ್ಚು ಪ್ರವಾಸ ಮಾಡಿದ ಪ್ರದೇಶದಲ್ಲಿ ಥಾಯ್ಲೆಂಡ್‌ನ ಕೊಹ್ ಸಮುಯಿ ದ್ವೀಪ ಮೊದಲ ಸ್ಥಾನದಲ್ಲಿದೆ. ಹೀಗಾಗಿ ಹಲವು ಬಾರಿ ಈ ‘ದ್ವೀಪ ನನ್ನ ಎರಡನೇ ತವರು ಮನೆ’ ಎಂದು ಹೇಳಿಕೊಂಡಿದ್ದರು. ಸಂಜೆ ವೇಳೆ ಯೋಗ ಮಾಡಿ ವಾಪಸ್ ಬರುವುದಾಗಿ ಬಾಯ್‌ಫ್ರೆಂಡ್‌ಗೆ ಹೇಳಿ ಹೊಟೇಲ್‌ನಿಂದ ಹೊರಟಿದ್ದಾರೆ. ಆದರೆ ಮರಳಿ ಬರಲೇ ಇಲ್ಲ.

- Advertisement -

Related news

error: Content is protected !!