Monday, July 27, 2026
spot_imgspot_img
spot_imgspot_img

ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ದಿನೇಶ್ ಶೆಟ್ಟಿ ಚಿಕಿತ್ಸೆಗಾಗಿ ಪರಿಹಾರ ನೀಡಲು ಸಿಎಂ ಆದೇಶ

- Advertisement -
- Advertisement -

ಬಂಟ್ವಾಳ (ನ.8): ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಬಿಜೆಪಿ ಪುದು ಮಹಾಶಕ್ತಿ ಕೇಂದ್ರದ ಸಾಮಾಜಿಕ ಜಾಲತಾಣ ಪ್ರಮುಖರಾದ ದಿನೇಶ್ ಶೆಟ್ಟಿ ಕೊಟ್ಟಿಂಜರವರ ಚಿಕಿತ್ಸೆಗಾಗಿ ಸರ್ಕಾರದಿಂದ ಪರಿಹಾರ ನೀಡಬೇಕೆಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ನವೆಂಬರ್ 5 ರಂದು ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಸಲುವಾಗಿ ಮಾನ್ಯ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಮನವಿ ಸಲ್ಲಿಸಿದ್ದರು.

ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿಗಳು ದಿನೇಶ್ ಶೆಟ್ಟಿಯವರಿಗೆ ಐದು ಲಕ್ಷ ರೂನೀಡಿರುತ್ತಾರೆ. ಪರಿಹಾರ ಬಿಡುಗಡೆಗೊಳಿಸಿದ ಮುಖ್ಯಮಂತ್ರಿಗಳು ಹಾಗೂ ಮನವಿ ಸಲ್ಲಿಸಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

- Advertisement -

Related news

error: Content is protected !!