- Advertisement -
- Advertisement -





ಉಡುಪಿ: ವೃದ್ಧರೋರ್ವರು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ವೃದ್ಧ ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಮದ ನಿವಾಸಿ ನರಸಿಂಹ ಜೋಗಿ (78) ಎಂದು ಗುರುತಿಸಲಾಗಿದೆ.
6 ಅಡಿ 1 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂ.ಸಂಖ್ಯೆ: 0820- 2461044, ಮೊ.ನಂ: 9480805453 ಅನ್ನು ಸಂಪರ್ಕಿಸಬಹುದು ಎಂದು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
- Advertisement -