

ಪುಂಜಾಲಕಟ್ಟೆ: ಇಂಟರ್ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ KA19D5858 ನೇ ಬೊಲೆರೋ ಪಿಕಪ್ ಗೂಡ್ಸ್ ವಾಹನವನ್ನು ಕಳವು ಮಾಡಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಲಾಡಿ ಗ್ರಾಮದ ಅರ್ತಿಲ ಎಂಬಲ್ಲಿ ನಡೆದಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 76/2024 ಕಲಂ: 303(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬಂಡನೂರು ಮನೆ, ಮುದೋಳು ತಾಲೂಕು ಬಾಗಲಕೋಟೆ ಜಿಲ್ಲೆ ಕನಕಪ್ಪ ಯಮನಪ್ಪ ಕ್ಯಾದಿಗೇರಿ (24), ಹಾಗೂ ಹೊಸ ಫ್ಲ್ಯಾಟ್, ಮಡ್ಡಿಲಕ್ಕಮ್ಮ ದೇವಸ್ಥಾನದ ಬಳಿ, ಚಿಕ್ಕಮಾಗಿ ಗ್ರಾಮ, ಹುನಗಂದ ತಾಲೂಕು, ಬಾಗಲಕೋಟೆ ಜಿಲ್ಲೆ ರಮೇಶ್ ಚೌಹಾಣ್(26) ಎಂದು ಗುರುತಿಸಲಾಗಿದೆ.
ಫ್ಯಾಕ್ಟರಿ ಮಾಲಿಕರಾದ ಟೆರೆನ್ಸ್ ಜೋಶೆಲ್ ವೇಗಸ್ ಎಂಬವರಿಗೆ ಸೇರಿದ ವಾಹನವನ್ನು ಇಂಟರ್ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ KA19D5858 ನೇ ಬೊಲೆರೋ ಪಿಕಪ್ ಗೂಡ್ಸ್ ವಾಹನವನ್ನು ಡಿ.2 ರಂದು ಕಳ್ಳತನ ಮಾಡಲಾಗಿತ್ತು.
ಆರೋಪಿಗಳನ್ನು ಬಾಗಲಕೋಟೆಯಲ್ಲಿ ದಸ್ತಗಿರಿ ಮಾಡಲಾಗಿದ್ದು, ಆರೋಪಿಗಳು ಕಳವು ಮಾಡಿದ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ KA19D5858 ನೇ ನಂಬ್ರದ ಬೊಲೆರೋ ಪಿಕಪ್ ಗೂಡ್ಸ್ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ.
ಪ್ರಕರಣದ ಪತ್ತೆ ಕಾರ್ಯದಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಯತೀಶ್ ಎನ್, ಐ.ಪಿ.ಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ರಾಜೇಂದ್ರ ಡಿ.ಎಸ್ ರವರ ನಿರ್ದೇಶನದಂತೆ, ಬಂಟ್ವಾಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ವಿಜಯ ಪ್ರಸಾದ್ ರವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಶ್ರೀ ನಾಗೇಶ್ ಕದ್ರಿ ರವರ ನೇತೃತ್ವದಲ್ಲಿ, ಪುಂಜಾಲಕಟ್ಟೆ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ನಂದ ಕುಮಾರ್ ಎಂ.ಎಂ (ಕಾ&ಸು) & ಓಮನ ಎನ್.ಕೆ (ತನಿಖೆ) ರವರ ಜೊತೆಗೆ ಸಿಬ್ಬಂದಿಗಳಾದ ಸಂದೀಪ್ ಎಸ್, ರಾಹುಲ್ ರಾವ್, ರಜಿತ್, ಸಲೀಂ ಪಟೇಲ್, ಪ್ರಕಾಶ್, ರಮ್ಯ ವೇಣೂರು ಠಾಣಾ ಸಿಬ್ಬಂದಿ ಬಸವರಾಜ್ ಹಾಗೂ ಗಣಕಯಂತ್ರ ವಿಭಾಗದ ಸಿಬ್ಬಂದಿಗಳಾದ ಸಂಪತ್ ಮತ್ತು ದಿವಾಕರ ರವರು ಕಾರ್ಯನಿರ್ವಹಿಸಿರುತ್ತಾರೆ.