Thursday, June 4, 2026
spot_imgspot_img
spot_imgspot_img

ಹೆಂಡತಿ, ಮಾವನ ಕಿರುಕುಳ; ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ..!

- Advertisement -
- Advertisement -

ಬೆಂಗಳೂರು: ಹೆಂಡತಿ ಹಾಗೂ ಮಾವನ ಕಿರುಕುಳಕ್ಕೆ ಬೇಸತ್ತು ಹೆಡ್‌ಕಾನ್‌ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಹೆಚ್.ಸಿ.ತಿಪ್ಪಣ್ಣ ಎಂದು ಗುರುತಿಸಲಾಗಿದೆ. ನನ್ನ ಸಾವಿಗೆ ಪತ್ನಿ ಹಾಗೂ ಮಾವ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸಿವಿ ರಾಮನ್ ನಗರ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

ಘಟನೆ ಬಗ್ಗೆ ಬೈಯ್ಯಪ್ಪನಹಳ್ಳಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಿಪ್ಪಣ್ಣ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಬೈಯ್ಯಪ್ಪನಹಳ್ಳಿ ರೈಲ್ವೇ ನಿಲ್ದಾಣಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಾನು ನನ್ನ ಹೆಂಡತಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಹೆಂಡತಿಯ ತಂದೆಯಾದ ಯಮುನಪ್ಪ ಇವನು ನನಗೆ ಜೀವ ಬೆದರಿಕೆ ಹಾಕಿರುತ್ತಾನೆ. ಡಿ.12 ರಂದು ದೂರವಾಣಿ ಕರೆ ಮಾಡಿ ಮಾತನಾಡಿ ಬೆದರಿಕೆ ಹಾಕಿರುತ್ತಾನೆ. ಬೆಳಗ್ಗೆ ನಾನು ಕಾಲ್ ಮಾಡಿದಾಗಲೂ ಕೂಡ, ‘ನೀನು ಸತ್ತು ಹೋಗು ನನ್ನ ಮಗಳು ಚೆನ್ನಾಗಿರುತ್ತಾಳೆ’ ಎಂದು ಹೇಳಿ ಅವಾಚ್ಯ ಪದಗಳಿಂದ ಬೈದಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

- Advertisement -

Related news

error: Content is protected !!