





ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಭೇಟಿ ಮಾಡಿದ್ದಾರೆ.ವಕ್ಸ್ ವಿಚಾರದಲ್ಲಿ ಟೀಕೆ ಮಾಡಿಕೊಂಡು ಬಂದಿರುವ ಯತ್ನಾಳ್ ಸುವರ್ಣಸೌಧದಲ್ಲಿ ಜಮೀರ್ ಅಹಮ್ಮದ್ ಖಾನ್ ಕಚೇರಿಗೆ ಹೋಗಿ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.ಹೊಂದಾಣಿಕೆ ರಾಜಕೀಯ ವಿರುದ್ಧ ಯತ್ನಾಳ್ ಧ್ವನಿ ಎತ್ತುತ್ತಲೇ ಇದ್ದಾರೆ. ಹಾಗೇ ಯಾವ ಸಚಿವರ ಕಚೇರಿಗೆ ಹೋಗಿ ಯಾವುದೇ ಒಂದು ಪತ್ರ ಕೊಟ್ಟಿ ಎಂದು ಸ್ವಪಕ್ಷ ನಾಯಕರ ಹೊಂದಾಣಿಕೆ ರಾಜಕಾರಣದ ವಿರುದ್ಧ ಮಾತನಾಡಿದ್ದರು, ಇದೀಗ ಸಚಿವರನ್ನು ಭೇಟಿ ಮಾಡಿದ್ದಕ್ಕೆ ಕಾರ್ಯಕರ್ತರಿಗೆ ಬೇರೆ ಸಂದೇಶ ಹೋಗುತ್ತೆ ಎಂದು ಯತ್ನಾಳ್ ಈ ಭೇಟಿ ಹಿಂದಿನ ಉದ್ದೇಶವನ್ನು ಬಹಿರಂಗಪಡಿಸಿದ್ದಾರೆ. ಸಚಿವ ಜಮೀರ್ ಅವರನ್ನು ಭೇಟಿಯಾದದ್ದು ಕೇವಲ ಕ್ಷೇತ್ರದ ಅಭಿವೃದ್ಧಿಯ ವಿಚಾರಗಳಿಗೆ ಸಂಬಂಧಿಸಿದಂತೆ ಹೊರತು ಯಾವುದೇ ಚರ್ಚೆಗಲ್ಲ. ವಿಜಯಪುರ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಜನರ ಆಶೋತ್ತರವನ್ನು ಈಡೇರಿಸಲು ನಾನು ಬದ್ಧನಾಗಿದ್ದೇನೆ ಎಂದು ಯತ್ನಾಳ್ ಸ್ಪಷ್ಟಪಡಿಸಿದ್ದಾರೆ. ರಾಜಕೀಯವಾಗಿ ನಿರಂತರ ಕಚ್ಚಾಟ ನಡೆಸುತ್ತಿದ್ದ ಇವರು ಇದೀಗ ಪರಸ್ಪರ ಅನ್ನೋನ್ಯತೆಯಿಂದ ಮಾತನಾಡುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜನರು ವಿವಿಧ ರೀತಿಯ ಕಾಮೆಂಟ್ ಮಾಡುತ್ತಿದ್ದಾರೆ.








